
ಜಾಮೀನು ರದ್ದಾಗುತ್ತಿದ್ದಂತೆಯೇ ಪವಿತ್ರಾ ಗೌಡ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಗುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಪವಿತ್ರಾ ಗೌಡ, ಗೆಲವು ನಿಧಾನ ಆಗಬಹುದು ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಹಾಕಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆಯನ್ನು ಆಯ್ಕೆ ಮಾಡಿಕೊಳ್ತಿನಿ ಎಂದು ಕೂಡ ಹೇಳಿಕೊಂಡಿದ್ದರು.
ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮೇರೆಗೆ ಸುಪ್ರೀಂ ಕೋರ್ಟ್ ನ ನ್ಯಾ ಜೆಬಿ ಪಾರ್ದಿವಾಲಾ ಹಾಗೂ ಆರ್ ಮಹಾದೇವನ್ರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.
ಇದುವರೆಗೆ ನಾಲ್ವರ ಬಂಧನ
ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಮತ್ತು ಲಕ್ಷ್ಮಣ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.