ಮಂಗಳೂರು ನ್ಯಾಯಾಲಯದಿಂದ ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು ನ್ಯಾಯಾಲಯದಿಂದ ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಾ ಜಾಮೀನು ಮಂಜೂರುಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು.12ಕ್ಕೆ ಸುಮೋಟೋ ಪ್ರಕರಣ ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಸಮೀರ್ ಎಂ.ಡಿ. ಮಂಗಳೂರು ನ್ಯಾಯಾಲಯಕ್ಕೆ ಆ.19ರಂದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಗುರುವಾರ ಆದೇಶ ಕಾಯ್ದಿರಿಸಿತ್ತು. ಇಂದು ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.

Ads on article

Advertise in articles 1

advertising articles 2

Advertise under the article