
ಉಡುಪಿ; ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು
Saturday, August 23, 2025
ಉಡುಪಿ: ಮಹೇಶ್ ತಿಮರೋಡಿಗೆ ಉಡುಪಿಯ ಜಿಎಂಎಫ್‌ಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶರತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಂಜೆ 4ಕ್ಕೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ ಶರತುಬದ್ಧ ಜಾಮೀನು ಮಂಜೂರು ಮಂಜೂರು ಮಾಡಿ ಆದೇಶಿಸಿದರು. ಈ ಸಂದರ್ಭದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಜರಿದ್ದರು.