
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
Friday, August 29, 2025
ಉಚ್ಚಿಲ: ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕುಟುಂಬ ಸಮೇತ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ದೇವಸ್ಥಾನದ ವಾಸ್ತು, ಕಲ್ಲಿನ ಕೆತ್ತನೆ, ಮರದ ಕೆತ್ತನೆ ಹಾಗೂ ದೇವಸ್ಥಾನದ ಸ್ವಚ್ಛತೆಯನ್ನು ನೋಡಿ ಮೆಚ್ಚುಗೆ ಸೂಚಿಸಿ, ದೇವಸ್ಥಾನದಲ್ಲಿ ಇದೇ ಬರುವ ಸೆ. 22 ರಿಂದ ಅ.2 ರವರೆಗೆ ನಡೆಯುವ ದಸರಾ ಉತ್ಸವಕ್ಕೆ ಜಿಲ್ಲಾಡಳಿತ ವತಿಯಿಂದ ಸರ್ವ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ದಿನೇಶ್ ಎರ್ಮಾಳ್, ರಾಘವೇಂದ್ರ ಉಪಾಧ್ಯಾಯ, ಬಾಲಕೃಷ್ಣ ಪೂಜಾರಿ, ಲಾಲಾಜಿ ಕುಂದರ್ ಹಾಗೂ ದೇವಸ್ಥಾನದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಉಪಸ್ಥಿತರಿದ್ದರು.