ಸೆ.13ರಂದು ಉಡುಪಿಯಲ್ಲಿ "ಬೃಹತ್ ಉದ್ಯೋಗ ಮೇಳ": ಶಾಸಕ ಯಶ್ ಪಾಲ್ ಸುವರ್ಣ

ಸೆ.13ರಂದು ಉಡುಪಿಯಲ್ಲಿ "ಬೃಹತ್ ಉದ್ಯೋಗ ಮೇಳ": ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರಸಭೆ ಮತ್ತು ಮಲ್ಪೆ ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಜಂಟಿ ಆಶ್ರಯದಲ್ಲಿ ಎಂಎಸ್/ಎಸ್ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ ಪ್ರೆ.ಲಿ.ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಮತ್ತು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಸಹಕಾರದೊಂದಿಗೆ "ಬೃಹತ್ ಉದ್ಯೋಗ ಮೇಳ"ವನ್ನು ಸೆ.13ರಂದು ಬೆಳಿಗ್ಗೆ 8.30ರಿಂದ ಸಂಜೆ 5 ರವರೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ಅವರು, ಈಗಾಗಲೇ 100ಕ್ಕೂ ಅಧಿಕ ಕಂಪೆನಿಗಳು ನೋಂದಣಿ ಮಾಡಿಕೊಂಡಿವೆ. ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. 75 ಕೌಂಟರ್ ಗಳು ಇರಲಿದ್ದು, ಆನ್ ಲ್ಯೆನ್ ಮೂಲಕವೂ ನೋಂದಣಿ ಮಾಡಬಹುದು. ಬೆಳಿಗ್ಗೆ, ಸಂಜೆ ಉಪಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದರು. 

ಈ ಹಿಂದೆ ನಗರಸಭೆ ವತಿಯಿಂದ ಬನ್ನಂಜೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1410 ಮಂದಿಗೆ ಉದ್ಯೋಗ ಲಭಿಸಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರದ ಅಧ್ಯಕ್ಷ ಜ್ಞಾನೇಶ್ವರ ಕೋಟ್ಯಾನ್ ಇದ್ದರು.

Ads on article

Advertise in articles 1

advertising articles 2

Advertise under the article