ʻವಕ್ಫ್ ತಿದ್ದುಪಡಿ ಕಾಯ್ದೆʼಯ ಕೆಲ ಅಂಶಗಳಿಗೆ ಸುಪ್ರೀಂ ತಡೆ ಸಂವಿಧಾನಕ್ಕೆ ಸಂದ ಜಯ: ಡಾ. ಶೇಖ್ ವಾಹಿದ್
Tuesday, September 16, 2025
ಉಡುಪಿ: ದೇಶದಾದ್ಯಂತ ತೀವ್ರ ಚರ್ಚೆಗೆ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ವಕ್ಫ್ ಕಾಯ್ದೆ 2025ರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡುವ ಮೂಲಕ ಕೆಲವೊಂದು ಅಂಶಗಳಿಗೆ ತಡೆಯಾಜ್ಞೆ ನೀಡಿರುವುದು ಸಂವಿಧಾನಕ್ಕೆ ಸಂದ ಜಯ ಎಂದು ಕೆಪಿಸಿಸಿ ಮೈನಾರಿಟಿ ಕಮಿಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಶೇಖ್ ವಾಹಿದ್ ದಾವೂದ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿ ಜಾರಿ ಮಾಡಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025 ಅನ್ನು ಕಳೆದೊಂದು ವರ್ಷದಿಂದ ದೇಶಾದ್ಯಂತ ಮುಸಲ್ಮಾನರು, ಚಿಂತಕರು, ಪ್ರಗತಿಪರರು, ಕಾಂಗ್ರೆಸ್ ಹಾಗು ವಿಪಕ್ಷಗಳು ವಿರೋಧಿಸುವ ಮೂಲಕ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ್ದರು. ಸಂವಿಧಾನ ಭಾಹಿರವಾಗಿ ತರಲಾಗಿರುವ ಈ ವಕ್ಫ್ ತಿದ್ದುಪಡಿಗೆ ತಡೆಯಾಜ್ಞೆ ನೀಡಿರುವುದು ನಮಗೆಲ್ಲರಿಗೂ ಆಶಾಭಾವನೆಯನ್ನು ಮೂಡಿಸಿದೆ ಎಂದು ವಾಹಿದ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ.