ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಭಾರೀ ಮಳೆಯ ಪರಿಣಾಮ ಭೀಮಾ, ಕೃಷ್ಣಾ ನದಿ ಉಕ್ಕಿ ಹರಿದ್ದು, ಪರಿಣಾಮ ಪ್ರವಾಹ ಎದುಪಾಗಿ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ವೈಮಾನಿಕ ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳು ಕಲಬುರ್ಗಿ ವಿಮಾನ‌ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.

ಈ ನಡುವೆ ಮುಖ್ಯಮಂತ್ರಿಗಳ ವೈಮಾನಿಕ ಸಮೀಕ್ಷೆ ಕುರಿತು ಬಿಜೆಪಿ ವ್ಯಂಗ್ಯವಾಡಿದ್ದು, ಕೇರಳ ಹಾಗೂ ಹಿಮಾಚಲ ಪ್ರದೇಶದಲ್ಲಿ ಭೂ ಕುಸಿತ-ಪ್ರವಾಹವಾದಾಗ ಹೆಲಿಕಾಪ್ಟರ್ ವೇಗದಲ್ಲಿ ಪರಿಹಾರ ಘೋಷಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಪ್ರವಾಹ ಪೀಡಿತ ಉತ್ತರ ಕರ್ನಾಟಕಕ್ಕೆ ಪರಿಹಾರ ನೀಡುವಲ್ಲಿ ಮಾತ್ರ ಬುಲ್ಡೋಜರ್ ವೇಗಕ್ಕೆ ಮೊರೆ ಹೋಗಿರುವುದು ಏಕೆ..?? ಎಂದು ಪ್ರಶ್ನಿಸಿದೆ.

Ads on article

Advertise in articles 1

advertising articles 2

Advertise under the article