ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಗಪೂರ್ ರನ್ನು ಅಭಿನಂದಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ
Saturday, September 27, 2025
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಪೂರ್ ಅವರನ್ನು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗವು ಅಭಿನಂದಿಸಿದೆ.
ಈ ವೇಳೆ ಕೆಪಿಸಿಸಿ ಮೈನಾರಿಟಿ ಕಮಿಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಶೇಖ್ ವಾಹಿದ್ ದಾವೂದ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಕಾಂಗ್ರೆಸ್ ಮುಖಂಡರಾದ ನಾಗೇಶ್ ಉದ್ಯಾವರ, ದಿವಾಕರ ಶೆಟ್ಟಿ ಕಾಪು ಸೇರಿದಂತೆ ಮತ್ತಿತರರು ಹಾಜರಿದ್ದರು.



