ಗಾಳಿ-ಮಳೆಗೆ ಶೋಭಾ ಪೂಜಾರಿ ಮನೆಗೆ ಹಾನಿ; ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ
Monday, September 8, 2025
ಕಾಪು: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಗ್ರಾಮದ ಶೋಭಾ ಪೂಜಾರಿ ಅವರ ಮನೆಯ ಗೋಡೆ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಶೋಭಾ ಅವರು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು ಸೋಮವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅವರ ಮನೆಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆಗೆ ಗರಿಷ್ಠ ಪರಿಹಾರ ನೀಡುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದ ಶಾಸಕರು ಶೋಭಾ ಅವರ ಶಸ್ತ್ರಚಿಕಿತ್ಸೆಗೆ ನಾವೆಲ್ಲರೂ ಸೇರಿ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಬೆಳಪು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಭಟ್, ಸುರೇಂದ್ರ ಪಣಿಯೂರು, ಶ್ರೀಧರ್ ಮಣಿಪುರ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.