ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ; ಚಾಲನೆ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
Sunday, September 28, 2025
ಹಿರಿಯಡ್ಕ: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಹಿಂದೂ ಯುವ ಸೇನೆ ಹಿರಿಯಡಕ ಶಾಖೆ ವತಿಯಿಂದ ರಕ್ತನಿಧಿ ವಿಭಾಗ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ ಪ್ರಯುಕ್ತ ರವಿವಾರದಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಇಲ್ಲಿ ಆಯೋಜಿಸಲಾದ "ಬೃಹತ್ ರಕ್ತದಾನ ಶಿಬಿರ" ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹಿಂದೂ ಯುವಸೇನೆ ಜಿಲ್ಲಾ ಗೌರವಾಧ್ಯಕ್ಷರಾದ ಶೇಖರ್ ಶೆಟ್ಟಿ, ಅಧ್ಯಕ್ಷರಾದ ಅಜಿತ್ ಕುಮಾರ್, ಹಿರಿಯಡಕ ಶಾಲೆ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಹಾಗೂ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
