ಹಾಸನ; ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ; ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ

ಹಾಸನ; ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ದುರಂತ: ಮೃತರ ಸಂಖ್ಯೆ 10ಕ್ಕೆ ಏರಿಕೆ; ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ

ಹಾಸನ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 10ಕ್ಕೆ ಏರಿಕೆಯಾಗಿದೆ.

ನಿನ್ನೆ ರಾತ್ರಿ ಸಂಭವಿಸಿದ ಟ್ರಕ್‌ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಚಂದನ್‌ ಎಂಬ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಅಪಘಾತದಲ್ಲಿ 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರು ಹಾಸನ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಕೃಷ್ಣ ಬೌರೇಗೌಡ ಅವರು ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಅವರ ಕುಟುಂಬಗಳೊಂದಿಗೆ ಮಾತುಕತೆ ನಡೆಸಿದರು ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಇದಕ್ಕು ಮುನ್ನ ಕೃಷ್ಣ ಬೈರೇಗೌಡ ಅವರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ವೇಳೆ, ಜನರು ಪರಿಹಾರ ಕಡಿಮೆ ಎಂಬ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದಿಂದ ಘೋಷಿಸಲಾಗಿರುವ ಐದು ಲಕ್ಷ ರೂಪಾಯಿ ಪರಿಹಾರ ಸಾಕಾಗುವುದಿಲ್ಲ ಎಂದು ಜನ ಹೇಳಿದ್ದು, ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಜನರನ್ನು ಸಮಾಧಾನಪಡಿಸಿದ ಸಚಿವರು, ಹೆಚ್ಚಿನ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

Ads on article

Advertise in articles 1

advertising articles 2

Advertise under the article