ರಾಹುಲ್ ಗಾಂಧಿಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ; ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಹಿಡಿದ ಕೈ ಗನ್ನಡಿ: ಬಿ.ಕೆ ಹರಿಪ್ರಸಾದ್

ರಾಹುಲ್ ಗಾಂಧಿಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ; ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಹಿಡಿದ ಕೈ ಗನ್ನಡಿ: ಬಿ.ಕೆ ಹರಿಪ್ರಸಾದ್

ಬೆಂಗಳೂರು: ಸತ್ಯ,ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತ್ಮಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎಂದು ಘೋಷಿಸುತ್ತಿರುವುದು ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಹಿಡಿದ ಕೈ ಗನ್ನಡಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿಕೊಂಡಿರುವ ಅವರು, ದೇಶದ ಕೋಟ್ಯಾಂತರ ಜನರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್ ಗಾಂಧಿಯವರಿಗೆ ಈಗಾಗಲೇ ಬಿಜೆಪಿಯ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಈಗ ಪಕ್ಷದ ವಕ್ತಾರರೇ ಖಾಸಗಿ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿಯೇ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಮಾತಾಡಿದರೆ ಗುಂಡು ಹಾರಿಸುತ್ತೇವೆ ಎಂದು ಹೇಳಿಕೆ ನೀಡುವುದು ರಾಹುಲ್ ಗಾಂಧಿ ವಿರುದ್ಧ ಗಂಭಿರವಾಗಿ ಭಾರಿ ಪಿತೂರಿ ನಡೆಸಿರುವುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ.

ಇಂತಹ ಅಪಾಯವನ್ನು ದೇಶದ ಪ್ರತಿಯೊಬ್ಬ ನಾಯಕರು ಖಂಡಿಸಬೇಕಿದೆ. ದೇಶದ ವಿರೋಧ ಪಕ್ಷದ ನಾಯಕರನ್ನೇ ಬಹಿರಂಗವಾಗಿ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎನ್ನುವುದು ಬಿಜೆಪಿಯ ದ್ವೇಷಮಯ ರಾಜಕೀಯದ ಪರಮಾವಧಿ. ಕೂಡಲೇ ಬಿಜೆಪಿ ಪಕ್ಷ ಕೊಲೆ ಹೇಳಿಕೆ ನೀಡಿರುವ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article