ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 8 ಮಂದಿ ಮೃತ್ಯು; ಹಲವರಿಗೆ ಗಂಭೀರ ಗಾಯ; ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 8 ಮಂದಿ ಮೃತ್ಯು; ಹಲವರಿಗೆ ಗಂಭೀರ ಗಾಯ; ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. 

ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಇನ್ನು ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಕ್ ಚಾಲಕ ಭುವನೇಶ್ ಎಂಬಾತನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದು, ಭುವನೇಶ್ ಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೂವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.

ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಘೋಷಣೆ

ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಘಟನೆ ಟ್ವೀಟ್ ಮಾಡಿರುವ CM ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article