ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಮದುವೆ ಆಗಲು ನಿರಾಕರಿಸಿದ ಯುವತಿಯನ್ನು ಚೂರಿ ಇರಿದು ಹತ್ಯೆ; ಬಳಿಕ ಬಾವಿಗೆ ಹಾರಿ ಯುವಕ ಆತ್ಮಹತ್ಯೆ
Saturday, September 13, 2025
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುತ್ತನಕಟ್ಟೆ ಬಳಿ ಇಂದು ಬೆಳಗ್ಗೆ ಯುವತಿಗೆ ಚಾಕುವಿನಿಂದ ಇರಿದು ಕೊಲೆಗೈದ ಆರೋಪಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮದುವೆ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ, ತನ್ನ ನೆರೆಮನೆಯ ರಕ್ಷಿತಾ ಪೂಜಾರಿ (24) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಕೊಲೆ ಆರೋಪಿ ಕಾರ್ತಿಕ್ ಪೂಜಾರಿಯ ಮೃತದೇಹ ಅಲ್ಲೇ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈತ ಕೊಲೆ ಮಾಡಿದ ಬಳಿಕ ಪರಾರಿಯಾಗಿ ಅಲ್ಲೇ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.