ಪ್ರೀತಿಗೆ ಮನೆಯವರ ವಿರೋಧ; ಕೋಲಾರದ ಬ್ಯಾಟರಾಯನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟ ಪ್ರೇಮಿಗಳು!

ಪ್ರೀತಿಗೆ ಮನೆಯವರ ವಿರೋಧ; ಕೋಲಾರದ ಬ್ಯಾಟರಾಯನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟ ಪ್ರೇಮಿಗಳು!

ಕೋಲಾರ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಪನಮಾಕನಹಳ್ಳಿ ಗ್ರಾಮದ ಶ್ವೇತಾ (17) ಎಂಬಾಕೆ ಮೃತಪಟ್ಟಿದ್ದಾರೆ.

ಇವರಿಬ್ಬರ ಪ್ರೀತಿಗೆ 2 ಮನೆಯವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಬೈಕ್ ನಿಲ್ಲಿಸಿ, ಕೋಲಾರದಿಂದ ಬೆಂಗಳೂರಿಗೆ ತೆರಳುವ ರೈಲಿಗೆ ತಲೆಕೊಟ್ಟಿದ್ದಾರೆ.

ರೈಲಿನಡಿ ಸಿಲುಕಿದ ದೇಹಗಳು ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article