ವಿಶ್ವವಿಖ್ಯಾತ 'ಮೈಸೂರು ದಸರಾ'ಕ್ಕೆ ಚಾಲನೆ ನೀಡಿದ ಸಾಹಿತಿ ಬಾನು ಮುಷ್ತಾಕ್
ಮೈಸೂರು: ವಿಶ್ವವಿಖ್ಯಾತ 'ಮೈಸೂರು ದಸರಾ'ಕ್ಕೆ ಮೈಸೂರು ಚಾಮುಂಡಿ ಬೆಟ್ಟದಲ್ಲಿ ಹಿರಿಯ ಸಾಹಿತಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಚಾಲನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಬೆಳಗ್ಗೆ ಚಾಮುಂಡೇಶ್ವರಿ ದೇವಾಲಯದ ಹೊರಗೆ ಸ್ಥಾಪಿಸಲಾದ ವೇದಿಕೆಯಲ್ಲಿ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಬಂದಿದ್ದ ಬಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಮುನ್ನುಡಿ ನೀಡಿದರು.
ಅವರ ಜೊತೆ ಸಿಎಂ ಸಿದ್ದರಾಮಯ್ಯ, ಸಚಿವ ಹೆಚ್ ಸಿ ಮಹದೇವಪ್ಪ, ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿಗಳು, ಶಾಸಕರು ಹಾಜರಿದ್ದರು.
ಮೈಸೂರು ಅರಮನೆ ನಗರಿ ಮತ್ತೆ ಸಿಂಗಾರಗೊಂಡಿದ್ದು, ವಾರ್ಷಿಕ ದಸರಾ ಆಚರಣೆಯ ಉದ್ಘಾಟನೆಗೊಂಡಿದೆ. 10 ದಿನಗಳ ಈ ಉತ್ಸವದಲ್ಲಿ, 1610 ರಲ್ಲಿ ಪ್ರಾರಂಭವಾದ ನವರಾತ್ರಿ ಹಬ್ಬದ ಸಂಪ್ರದಾಯವನ್ನು ಮುಂದುವರಿಸಲು ನಗರವು ಹಲವಾರು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆತಿಥ್ಯ ವಹಿಸಲಿದೆ.
‘ನಾಡ ಹಬ್ಬ’ (ರಾಜ್ಯ ಉತ್ಸವ) ಎಂದು ಆಚರಿಸಲಾಗುವ ಈ ಉತ್ಸವವು ಈ ವರ್ಷ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ಅದ್ಧೂರಿ ಸಮಾರಂಭವಾಗಲಿದೆ ಮತ್ತು ರಾಜಮನೆತನದ ವೈಭವ ಮತ್ತು ವೈಭವವನ್ನು ನೆನಪಿಸುತ್ತದೆ.
ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಇಡೀ ಕುಟುಂಬವೇ ಹಾಜರಾಗಿದೆ. ಖಾಸಗಿ ಹೋಟೆಲಿನಿಂದ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಆಗಮಿಸಿದರೆ ಸಿಎಂ ಮತ್ತು ಸಚಿವರು ಐರಾವತ ಬಸ್ಸಿನಲ್ಲಿ ಆಗಮಿಸಿದರು. ಜಾನಪತ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿದವು.