ಕಾಪು ತಾಲೂಕು ಆಡಳಿತ ವತಿಯಿಂದ ಇಂದು ದಿನಾಂಕ 07-09-2025 ರಂದು ಕಾಪು ತಾಲೂಕು ಪ್ರಜಾ ಸೌಧದಲ್ಲಿ ಆಯೋಜಿಸಲಾದ "ಬ್ರಹ್ಮಶ್ರೀ ನಾರಾಯಣಗುರು ಜಯಂತಿ" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿ ಅಧ್ಯಕ್ಷರಾದ ಮಹೇಶ್ ಅಂಚನ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ, ಕಾಪು ತಹಶೀಲ್ದಾರರಾದ ಪ್ರದೀಪ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಹಾಗೂ ಕಾಪು ತಾಲೂಕಿನ ಸರ್ವ ಬಿಲ್ಲವರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
