ಉಡುಪಿಯಲ್ಲಿ ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಬರ್ಬರ ಹತ್ಯೆ; ಮೂವರಿಂದ ಕೃತ್ಯ: SP ಹರಿರಾಮ್ ಶಂಕರ್ ಹೇಳಿದ್ದೇನು...?
Saturday, September 27, 2025
ಮಲ್ಪೆ: ಉಡುಪಿ ಆತ್ರಾಡಿಯ ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಶನಿವಾರ ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ತಿಳಿದುಬಂದಿದೆ.
ಕೃತ್ಯದ ನಡೆದ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಆಗಮಿಸಿದ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂವರಿಂದ ಈ ಕೃತ್ಯ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಆರೋಪಿಗಳು ಚಾಲಕರರಾಗಿರುವ ಶಂಕೆಯಿದೆ ಎಂದು ತಿಳಿಸಿದರು. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಮಾರಾಕಾಸ್ತಗಳಿಂದ ಕೊಚ್ಚಿ ಕೊಲೈಗೈದಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.