ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಮಲ್ಪೆ ಪೊಲೀಸರು
Sunday, September 28, 2025
ಉಡುಪಿ: ಶನಿವಾರ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎಕೆಎಂಎಸ್ ಖಾಸಗಿ ಬಸ್ ಮಾಲಕ, ರೌಡಿ ಶೀಟರ್ ಸೈಯಿಪುದ್ದಿನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು.
ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ರ್ಯಾ ಕಸ್ಟಡಿಗೆ ಪಡೆದುಕೊಳ್ಳಲ್ಲಾಗಿದೆ. ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಲ್ಪೆ ಎಸ್ಸೈ ಅನಿಲ್ ಕುಮಾರ್ ಡಿ. ಹಾಗೂ ಸಿಬ್ಬಂದಿಯವರ ವಿಶೇಷ ತಂಡ ನಡೆಸಿದೆ.