ಕಾಪು; ಪೌರ ಕಾರ್ಮಿಕರನ್ನು ಸನ್ಮಾನಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು; ಪೌರ ಕಾರ್ಮಿಕರನ್ನು ಸನ್ಮಾನಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ಪುರಸಭೆಯ ಸಭಾಂಗಣದಲ್ಲಿ ಬುಧವಾರ ನಡೆದ "ಪೌರ ಕಾರ್ಮಿಕರ ದಿನಾಚರಣೆ-2025" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಅಭಿನಂದನೆಗಳು ಸಲ್ಲಿಸಿದರು.








ಶಾಸಕರು ಮಾತನಾಡಿ ಕಾಪು ಪುರಸಭೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಡಲು  ಪೌರ ಕಾರ್ಮಿಕರ ಪಾತ್ರ ಪ್ರಮುಖವಾದದ್ದು ಇವರನ್ನು ಸನ್ಮಾನಿಸುವ ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್ ಹಾಗೂ ಕಾಪು ಪುರಸಭೆಯ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article