ಲಾರಿಯಲ್ಲಿ ಸಾಗಿಸುತ್ತಿದ್ದ 65 ಕೆ.ಜಿ. ಗಾಂಜಾ ವಶಕ್ಕೆ ಪಡೆದ ಉಡುಪಿ ಸೆನ್ ಪೊಲೀಸರು
Thursday, September 11, 2025
ಉಡುಪಿ: ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಪಾರ ಮೌಲ್ಯದ ಗಾಂಜಾವನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಗುರುವಾರ ಬೆಳಗ್ಗೆ ಉಡುಪಿ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 65ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ಎನ್ನಲಾಗಿದೆ..
ಲಾರಿ ಹಾಗೂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.