ಕರಾವಳಿಯ ಮೂರು ಜಿಲ್ಲೆಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಎಂ.ಎ.ಗಫೂರ್
ಕಾಪು ಕೊಪ್ಪಲಂಗಡಿಯ ಇನಾಸನ್ ಆಡಿಟೋರಿಯಂ ವತಿಯಿಂದ ಗಫೂರ್ ಅವರಿಗೆ ಅಭಿನಂದನಾ ಕಾರ್ಯಕ್ರಮ
ಕಾಪು: ಕರಾವಳಿಯ ಮೂರು ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಕರಾವಳಿಯ ಸಮಗ್ರ ಅಭಿವೃಧ್ಧಿಗೆ ಮಾಸ್ಟರ್ ಪ್ಲಾನ್ ರಚಿಸಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ.
ಕಾಪು ಕೊಪ್ಪಲಂಗಡಿಯ ಇನಾಸನ್ ಆಡಿಟೋರಿಯಂ ಸಭಾಂಗಣದ ವತಿಯಿಂದ ರವಿವಾರ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.
ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಇಲ್ಲಿನ ಅಭಿವೃದ್ಧಿಗೆ ಈ ಭಾಗದ ಶಾಸಕರು, ಪಕ್ಷದ ಮುಖಂಡ ರೊಂದಿಗೆ ಚರ್ಚಿಸಿ ಅಭಿಪ್ರಾಯವನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಲಾಗುವುದು. ಆ ಮೂಲಕ ಸರಕಾರ ನನಗೆ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತೇನೆ ಎಂದರು.
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ವ್ಯಕ್ತಿ ನಿಷ್ಠೆ, ಪಕ್ಷ ನಿಷ್ಟೆ, ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಂಡಾಗ ಗುರಿಮುಟ್ಟಲು ಸಾಧ್ಯ. ಗಫೂರ್ ಪಕ್ಷಕ್ಕಾಗಿ ನಿರಂತರ ಸೇವೆಯನ್ನು ನೀಡುತ್ತಾ, ಅಂಬೇಡ್ಕರ್ ನೀಡಿದ ಸಂವಿಧಾನದ ಸಿದ್ಧಾಂತದವನ್ನು ಅವಳಡಿಸಿಕೊಂಡು ಸೇವೆಯನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಗಫೂರ್ ಅವರಿಗೆ ಸೂಕ್ತ ಸ್ಥಾನ ಮಾನ ಸಿಕ್ಕಿದೆ ಎಂದು ಹೇಳಿದರು.
ಮೂಳೂರು ಅಲ್‌ಇಹ್ಸಾನ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ಯು.ಕೆ. ಮುಸ್ತಫಾ ಸಅದಿ, ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಡಾ.ಪ್ರಶಾಂತ್ ಶೆಟ್ಟಿ, ಕಂಬಳ ಅಸೋಸಿಯೇಶನ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸಮಾಜ ಸೇವಕ ಅಬ್ದುಲ್ ಜಲೀಲ್ ಸಾಹೇಬ್ ಉದ್ಯಾವರ, ಶಭಿ ಕಾಝಿ, ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕರೆ ರತ್ನಾಕರ ಶೆಟ್ಟಿ, ಸುಧಾಕರ ಶೆಟ್ಟಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಶೇಖ್ ವಾಹೀದ್ ದಾವೂದ್, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್‌ಚಂದ್ರ ಜೆ.ಶೆಟ್ಟಿ, ಅಲ್ ರಿಹಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ಅಬ್ದುಲ್ಲಾ, ಇನಾಸನ್ ಆಡಿಟೋರಿಯಂ ಸಂಸ್ಥೆಯ ಅಧ್ಯಕ್ಷ ಸಾದಿಕ್ ದೀನಾರ್, ಕಾರ್ಯದರ್ಶಿ ನಝೀರ್ ಅಹಮದ್, ಸುಲೈಮಾನ್, ಶಾಬು ಸಾಹೇಬ್, ಲುತ್ಫುಲ್ ರಹ್ಮಾನ್ ಸಾಹೇಬ್, ಕಯ್ಯೂಂ ಸಾಹೇಬ್ ಉಪಸ್ಥಿತರಿದ್ದರು. ಆದಿಲ್ ಸ್ವಾಗತಿಸಿದರು. ಅಮೀರ್ ಕಾಪು ಕಾರ್ಯಕ್ರಮ ನಿರ್ವಹಿಸಿದರು.
