ಬೆಂಗಳೂರು; ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಲವಂತವಾಗಿ ಬಟ್ಟೆ ಬಿಚ್ಚಲು ಒತ್ತಾಯಿಸಿದ ಡಾಕ್ಟರ್': ಯುವತಿತಿಂದ ದೂರು, ಬಂಧನ

ಬೆಂಗಳೂರು; ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಲವಂತವಾಗಿ ಬಟ್ಟೆ ಬಿಚ್ಚಲು ಒತ್ತಾಯಿಸಿದ ಡಾಕ್ಟರ್': ಯುವತಿತಿಂದ ದೂರು, ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ 22 ವರ್ಷದ ಯುವತಿಯೊಬ್ಬರಿಗೆ 56 ವರ್ಷದ ಚರ್ಮರೋಗ ತಜ್ಞ ಕಿರುಕುಳ ನೀಡಿರುವ ಘಟನೆಯೊಂದು ವರದಿಯಾಗಿದೆ. 

ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಅಕ್ಟೋಬರ್ 20ರಂದು 56 ವರ್ಷದ ಚರ್ಮ ರೋಗ ತಜ್ಞ ಡಾ. ಪ್ರವೀಣ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

21 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಡಾ. ಪ್ರವೀಣ್ ಅವರನ್ನು ಅಶೋಕ್ ನಗರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಬಗ್ಗೆ ದೂರು ದಾಖಲಾಗಿದ್ದು, ಯುವತಿ ಕ್ಲಿನಿಕ್​​ ಒಳಗೆ ಇರುವ ವೇಳೆ ಈ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ಯುವತಿ ತನ್ನ ತಂದೆ ಜತೆಗೆ ಕ್ಲಿನಿಕ್​​ಗೆ ಭೇಟಿ ನೀಡಿದ್ದಾರೆ. ಆದರೆ ಆಕೆಯ ತಂದೆ ಕ್ಲಿನಿಕ್​​ ಒಳಗೆ ಬಂದಿಲ್ಲ.

ಇನ್ನು ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ವೈದ್ಯ ಡಾ. ಪ್ರವೀಣ್ ಅವರು ಪರಿಸ್ಥಿತಿಯ ಲಾಭ ಪಡೆದು ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಹಲವಾರು ಬಾರಿ ತನ್ನನ್ನು ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಹಾಗೂ ನನ್ನ ಜತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಪರೀಕ್ಷೆ ಮಾಡಬೇಕು ಎಂದು ವೈದ್ಯರು ತನ್ನ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ. ಖಾಸಗಿಯಾಗಿ ಸಮಯ ಕಳೆಯಲು ಹೋಟೆಲ್ ರೂಮ್​​ಗೆ ಬರುವಂತೆ ಹೇಳಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆ ನಡೆದ ನಂತರ ಯುವತಿ ತನ್ನ ಮನೆಯವರಿಗೆ ತಿಳಿಸಿದ್ದು, ಯುವತಿಯ ಕುಟುಂಬದವರು, ಅಕ್ಕ-ಪಕ್ಕದ ನಿವಾಸಿಗಳೊಂದಿಗೆ ಕ್ಲಿನಿಕ್​​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಹಾಗೂ ವೈದ್ಯರನ್ನು ಬಂಧಿಸಿದ್ದಾರೆ. ಆದರೆ ವೈದ್ಯರು ಈ ಆರೋಪವನ್ನು ನಿರಾಕರಿಸಿದ್ದಾರೆ. ನಾನು ಮಾಡಿದ ಚಿಕಿತ್ಸೆಯ ಕ್ರಮವನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article