ಬಿಗ್‌ಬಾಸ್ ಮನೆ ಬಂದ್‌; ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು...?

ಬಿಗ್‌ಬಾಸ್ ಮನೆ ಬಂದ್‌; ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು...?

ಬೆಂಗಳೂರು: ಪರಿಸರ ಕಾಯಿದೆ ಉಲ್ಲಂಘನೆ ಹಿನ್ನಲೆಯಲ್ಲಿ ಬಿಗ್ ಬಾಸ್ ಸೀಸನ್ 12 ಮುಚ್ಬಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಕ್ಸ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್‌ಟೈನ್ಮೆಂಟ್ ಪ್ರೈ. ಲಿ. (ಜಾಲಿವುಡ್ ಸ್ಟುಡಿಯೋ) ಸಂಸ್ಥೆಗೆ ಜಲ ಕಾಯಿದೆ ಹಾಗೂ ವಾಯು ಕಾಯಿದೆಯಡಿ ಅಗತ್ಯ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ.

ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಈ ಸ್ಟುಡಿಯೋಗೆ ಮಂಡಳಿ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಆಗದ ಕಾರಣ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಎಸ್.ಟಿ.ಪಿ. ಸರಿಯಾಗಿ ಕಾರ್ಯನಿರ್ವಹಿಸದಿರುವುದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿಲ್ಲದಿರುವುದು ಹಾಗೂ ಜನರೇಟರ್‌ಗಳಿಗೂ ಅಗತ್ಯ ಅನುಮತಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಪರಿಸರ ಕಾಯಿದೆ ಉಲ್ಲಂಘಿಸಿದರೆ ಕ್ರಮ ಅನಿವಾರ್ಯ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಜಾಲಿವುಡ್ ಮುಖ್ಯದ್ವಾರಕ್ಕೆ ಬೀಗ ಹಾಕಲಾಗಿದ್ದು, ಸ್ಪರ್ಧಿಗಳು ಮತ್ತು ಸಿಬ್ಬಂದಿ ಸೆಟ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದಿನ ಸಂಚಿಕೆ ರೆಡಿಯಾಗಿದ್ದು, ಇವತ್ತು ಪ್ರಸಾರವಾಗಲಿದೆ. ಈಗಾಗಲೇ ಬಿಗ್‌ಬಾಸ್ ಆಡಳಿತ ಸಿಬ್ಬಂದಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಈವರೆಗೂ ಬಿಗ್‌ಬಾಸ್ ತಂಡ ಅಥವಾ ವಾಹಿನಿಯಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.


Ads on article

Advertise in articles 1

advertising articles 2

Advertise under the article