ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

2025ರ ಮೇ 27ರಂದು ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ. ಅಲ್ಲದೆ ಅಶ್ರಫ್ ಕಲಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿಯೂ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ 15 ಪ್ರಕರಣ ದಾಖಲಾಗಿದೆ.

2017 ಜೂನ್ 21 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜಿನಪದವು ಗ್ರಾಮದಲ್ಲಿ ಆಟೋ ಚಾಲಕ ಮಹಮ್ಮದ್ ಅಶ್ರಫ್​​ನನ್ನು ಕೊಚ್ಚಿ ಕೊಲೆ ಮಾಡಲಾಗಿತ್ತು. ಅಶ್ರಫ್​ ಅಮ್ಮುಂಜೆ ಗ್ರಾಮದ ಎಸ್​ಡಿಪಿಐ ಪಕ್ಷದ ಅಧ್ಯಕ್ಷರಾಗಿದ್ದರು. ಆಟೋ ಚಾಲಕರೂ ಆಗಿದ್ದರು. ಪಕ್ಷದ ಧ್ವಜ ಸಂಸ್ಥಾಪನ ದಿನದಲ್ಲಿ ಪಾಲ್ಗೊಂಡ ಬಳಿಕ ವಾಡಿಕೆಯಂತೆ ಶೀನಪ್ಪ ಪೂಜಾರಿ ಎಂಬುವವರ ಜೊತೆ ಬೆಂಬನಪದವಿಗೆ ಆಟೋ ಬಾಡಿಗೆಗೆ ತೆರಳಿದ್ದರು. ಈ ವೇಳೆ ಬೈಕ್​​ನಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳ ತಂಡ ಅಶ್ರಫ್​​ರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪಿಕಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹಿಮಾನ್​​ನನ್ನು ಕೊಲೆ ಮಾಡಲಾಗಿತ್ತು. ಗೂಂಡಾ ಪಡೆ ಏಕಾಏಕಿ ತಲವಾರಿನಿಂದ ದಾಳಿ ನಡೆಸಿತ್ತು. ಪರಿಣಾಮ ಇಮ್ತಿಯಾಜ್ ಅಲಿಯಾಸ್ ಅಬ್ದುಲ್ ರಹಿಮಾನ್ ಸ್ಥಳದಲ್ಲೇ ಮೃತಪಟ್ಟಿದ್ದ.

Ads on article

Advertise in articles 1

advertising articles 2

Advertise under the article