ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ


ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ‌ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೂ ದಾಳಿಯಾಗಿದೆ. 

ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್‌ ನಾಯ್ಕ್‌ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ. ದಾವಣಗೆರೆಯಿಂದ ಎರಡು ಜೀಪುಗಳಲ್ಲಿ ಆಗಮಿಸಿರುವ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. 

ಬೆಂಗಳೂರಿನಲ್ಲಿ ಮೂವರು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ವೈದ್ಯಕೀಯ ಅಧಿಕಾರಿ ಮಂಜುನಾಥ್‌, ಪಿಯು ಬೋರ್ಡ್‌ ನಿರ್ದೇಶಕಿ ಸುಮಂಗಳ, ಸರ್ವೇಯರ್ ಅಧಿಕಾರಿ ಗಂಗಾ ಮರೀಗೌಡ ಅವರ ಮನೆಗಳ ಮೇಲೆ ಲೋಕಾಯುಕ್ತ ತಂಡ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ತಂಡ ಸುಮಂಗಳ ಅವರ ಕೆಂಗೇರಿಯ ಸ್ಯಾಟಲೈಟ್ ಟೌನ್‌ನಲ್ಲಿರೋ ಮನೆ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದೆ.

ಬಾಗಲಕೋಟೆಯಲ್ಲಿ ಕೆಬಿಜೆಎನ್‌ಎಲ್‌ AEE (ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜನಿಯರ್) ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆಲಮಟ್ಟಿ ಬಲದಂಡೆ ಕಾಲುವೆಯ ಸಹಾಯಕ ಮುಖ್ಯ ಇಂಜಿನಿಯರ್ ಚೇತನ್. ನವನಗರದ ಸೆಕ್ಟರ್ 16ರಲ್ಲಿರುವ ಚೇತನ್‌ ಅವರ ಮನೆ ಹಾಗೂ ಕಮತಗಿಯಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.

Ads on article

Advertise in articles 1

advertising articles 2

Advertise under the article