8 ದಿನಗಳಿಂದ ಪ್ರೇಯಸಿಯೊಂದಿಗೆ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರಿನ ಯುವಕನ ನಿಗೂಢ ಸಾವು!

8 ದಿನಗಳಿಂದ ಪ್ರೇಯಸಿಯೊಂದಿಗೆ ಬೆಂಗಳೂರಿನ ಲಾಡ್ಜ್​​​​ನಲ್ಲಿದ್ದ ಪುತ್ತೂರಿನ ಯುವಕನ ನಿಗೂಢ ಸಾವು!

ಬೆಂಗಳೂರು: ಪ್ರೇಯಸಿ  ಜೊತೆ ಲಾಡ್ಜ್​ ನಲ್ಲಿ ತಂಗಿದ್ದ ಪ್ರಿಯಕರ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಡಿವಾಳದಲ್ಲಿ ನಡೆದಿದೆ.

ಬೆಂಗಳೂರಿನ (Bengaluru) ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) ನಿಗೂಢವಾಗಿ ಸಾವನ್ನಪ್ಪಿದ್ದಾನೆ. 8 ದಿನದ ಹಿಂದೆ ಪ್ರೇಯಸಿ ಜತೆ ಬೆಂಗಳೂರಿಗೆ ಬಂದಿದ್ದ ತಕ್ಷಿತ್, ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ಹುಡುಗಿ ಜೊತೆ ವಾಸವಾಗಿದ್ದ. ಆದ್ರೆ, ನಿನ್ನೆ (ಅಕ್ಟೋಬರ್ 17) ಲಾಡ್ಜ್​ ನ ರೂಮಿನಲ್ಲಿ ತಕ್ಷಿತ್ ಶವವಾಗಿ ಪತ್ತೆಯಾಗಿದ್ದಾನೆ.

ಪುತ್ತೂರಿನಿಂದ ಬಂದಿದ್ದ ಯುವಕ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್ ಮಾಡಿಕೊಂಡಿದ್ದ. ಯುವಕನ ಸಾವಿಗೂ ಮುನ್ನ ಯುವತಿ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾಳೆ ಎನ್ನಲಾಗಿದೆ. ಸ್ವಿಗ್ಗಿಯಿಂದ ಊಟ ಆರ್ಡರ್ ಮಾಡಿದ ಪ್ರೇಮಿಗಳು ಒಟ್ಟಿಗೆ ಊಟ ಮಾಡಿದ್ದರು. ನಂತರ ಇಬ್ಬರಿಗೆ ಫುಡ್ ಪಾಯ್ಸಿನ್ ಆಗಿ ಮಾತ್ರೆಗಳನ್ನು ತಿಂದಿದ್ದರು. ಸ್ವಲ್ಪ ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ರೂಮಿನಲ್ಲಿ ಯುವಕ ತಕ್ಷಿತ್ ಮಾತ್ರ ಮೃತಪಟ್ಟಿದ್ದಾನೆ.

8 ದಿನವೂ ಊಟ ತರಿಸಿಕೊಂಡು ಊಟ ಮಾಡಿದ್ದರು. ನಂತರ ಮೆಡಿಕಲ್ ಗೆ ಹೋಗಿ ಇಬ್ಬರು ಮಾತ್ರೆಗಳನ್ನು ಸೇವಿಸಿದ್ದಾರೆ.ಸುಧಾರಿಸಿಕೊಂಡ ಬಳಿಕ ರಕ್ಷಿತಾ ಲಾಡ್ಜ್ ನಿಂದ ಹೊರಗಡೆ ಹೋಗಿದ್ದಾರೆ. ಆದರೆ ತಕ್ಷಿತ್ ಮಾತ್ರ ಮಲಗಿದ್ದವನು ಮತ್ತೆ ಏಳಲೇ ಇಲ್ಲ. ಯುಡಿಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಯುವಕನ ಸಾವಿಗೆ ತನಿಖೆಯಿಂದಷ್ಟೇ ಕಾರಣ ತಿಳಿದು ಬರಬೇಕಿದೆ.

Ads on article

Advertise in articles 1

advertising articles 2

Advertise under the article