ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಖ್ಯಾತ ಡ್ರಮ್ಸ್ ವಾದಕ ಶಿವಮಣಿ
Saturday, October 25, 2025
ಉಚ್ಚಿಲ: ಖ್ಯಾತ ಡ್ರಮ್ಸ್ ವಾದಕ, ಪದ್ಮಶ್ರೀ ಪುರಸ್ಕೃತ ಶಿವಮಣಿ ಅವರು ಶನಿವಾರ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರಾಧ್ಯಕ್ಷರಾದ ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ನಾರಾಯಣ ಸಿ. ಕರ್ಕೇರ, ಸುಜಿತ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
