ನಟ, ಹಿರಿಯ ರಂಗ ಕಲಾವಿದ ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ

ನಟ, ಹಿರಿಯ ರಂಗ ಕಲಾವಿದ ಹೃದಯಾಘಾತದಿಂದ ನಟ ರಾಜು ತಾಳಿಕೋಟೆ ನಿಧನ

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ  ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ರವಿವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.

ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ರವಿವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಈ ಮೊದಲು ಕೂಡ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು. ವಿಜಯಪುರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article