ಶಾಲೆಗಳಿಗೆ ಅಕ್ಟೋಬರ್ 18ರ ವರೆಗೆ ರಜೆ ಘೋಷಣೆ: ಶಿಕ್ಷಣ ಇಲಾಖೆಯ ಅಧಿಕೃತ ಆದೇಶ ಹೀಗಿದೆ....

ಶಾಲೆಗಳಿಗೆ ಅಕ್ಟೋಬರ್ 18ರ ವರೆಗೆ ರಜೆ ಘೋಷಣೆ: ಶಿಕ್ಷಣ ಇಲಾಖೆಯ ಅಧಿಕೃತ ಆದೇಶ ಹೀಗಿದೆ....

ಬೆಂಗಳೂರು: ಕರ್ನಾಟಕದಲ್ಲಿ  ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ (Caste Survey) ಪೂರ್ಣಗೊಳಿಸಲು ಇನ್ನೂ 10 ದಿನ ಕಾಲಾವಕಾಶ ಬೇಕೆಂದು ರಾಜ್ಯ ಶಿಕ್ಷಕರ ಸಂಘ ಸಿಎಂ ಸಿದ್ದರಾಮಯ್ಯನವರಿಗೆ ಮಾಡಿದೆ. ಈ ಮನವಿಯನ್ನು ಪುರಸ್ಕರಿಸಿದ ಸಿಎಂ  ಅಕ್ಟೋಬರ್ 18ರ ವರೆಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ನೀಡಲು ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. 

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ದಸರಾ ರಜೆ ವಿಸ್ತರಣೆ ಬಗ್ಗೆ ಘೋಷಣೆ ಮಾಡಿದರು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು (Karnataka Education Department) ಅ.28ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಆದೇಶ  ಹೀಗಿದೆ...

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ರವರು ಸನ್ಮಾನ್ಯ ಮುಖ್ಯ ಮಂತ್ರಿಗಳವರಿಗೆ ನೀಡಿದ ಮನವಿ ಪತ್ರ ದಿ: 06-10-2025 ರಲ್ಲಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಇವರು ನಮೂದಿಸಿದ ಟಿಪ್ಪಣಿಯಲ್ಲಿ ಸದರಿ ಮನವಿ ಕುರಿತು ಮಾನ್ಯ ಮುಖ್ಯಮಂತ್ರಿಗಳು ನೀಡುವ ಸೂಚನೆಯಂತೆ ಕ್ರಮವಹಿಸಿ ಎಂದು ನಿರ್ದೇಶಿಸಿರುತ್ತಾರೆ ಎಂದು ತಿಳಿಸಿದ್ದಾರೆ.

ಸದರಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ರವರ ಸಮೀಕ್ಷೆಯ ಕಾರ್ಯವನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಅವಶ್ಯಕವಿದ್ದು ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು ಶಾಲೆಗಳಿಗೆ ಹೆಚ್ಚುವರಿ ದಸರಾ ರಜೆಗಳನ್ನು ನೀಡಿ ಸಮೀಕ್ಷೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿರುತ್ತಾರೆ. ಹಾಗೂ ವಿದ್ಯಾರ್ಥಿಗಳಿಗೆ ಮುಂದೆ ವಿಶೇಷ ಬೋಧನಾ ಅವಧಿಗಳನ್ನು ನಡೆಸಲಾಗುವುದು ಎಂದಿರುತ್ತಾರೆ.

ಇನ್ನು ದಿನಾಂಕ 07-10-2025 ರಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಿದ ಸೂಚನೆಗಳ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ.

ಬೆಂಗಳೂರು ನಗರ ಮತ್ತು ರಾಜ್ಯದ ಇತರ ಎಲ್ಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಪೂರ್ಣಗೊಳಿಸುವುದಕ್ಕೆ ರಾಜ್ಯದ ರಾಜ್ಯ ಪಠ್ಯಕ್ರಮದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ದಿನಾಂಕ: 18-10-2025 ರ ವರೆಗೆ ವಿಸ್ತರಿಸಲಾಗಿದೆ.

ಶಿಕ್ಷಕರು ಸಮೀಕ್ಷೆ ಕಾರ್ಯವನ್ನು ದಿ: 19-10-2025 ರೊಳಗೆ ಪೂರ್ಣಗೊಳಿಸಬೇಕು. ಅವಧಿಯಲ್ಲಿ ಮಕ್ಕಳ ಕಲಿಕೆಗೆ ಉಂಟಾಗುವ ಕೊರತೆಯ ಅವಧಿಯನ್ನು ರಜಾ ದಿನಗಳ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸುವುದು.

ದಿನಾಂಕ 12-010-2025ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡ ಉಪನ್ಯಾಸಕರನ್ನು ಸಮೀಕ್ಷಾ ಕಾರ್ಯದಿಂದ ಬಿಡುಗಡೆಗೆ ತಿಳಿಸುವುದು.

ಈ ಎಲ್ಲಾ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು. ಇನ್ನೂ ಕಾಲ ಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article