ವಿಜಯಪುರ; ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್; ಐವರ ಬಂಧನ; ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಅಕ್ಷಯ್ ಕಾಲಿಗೆ ಗುಂಡು

ವಿಜಯಪುರ; ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್; ಐವರ ಬಂಧನ; ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಅಕ್ಷಯ್ ಕಾಲಿಗೆ ಗುಂಡು

ವಿಜಯಪುರ: ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಐದು ಜನರನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಆರೋಪಿ ಅಕ್ಷಯ್ ಜುಲ್ಜುಲೆ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, 'ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ, ಜುಲ್ಜುಲೆ ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಆರೋಪಿ ಪರಾರಿಯಾಗಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದರು.

ಜುಲ್ಜುಲೆ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು, ಸದ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಪೊಲೀಸರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಭಾನುವಾರ ಜೋಡಿ ಕೊಲೆ ಮಾಡಲಾಗಿತ್ತು. ಸಂತ್ರಸ್ತರನ್ನು ಸಾಗರ್ ಬೆಲುಂಡಗಿ (25) ಮತ್ತು ಇಸಾಹಕ್ ಖುರೇಶಿ (24) ಎಂದು ಗುರುತಿಸಲಾಗಿದೆ. ಆರೋಪಿಗಳು ಅವರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್‌ಸಿ ನಿಂಬರಗಿ ಮಾತನಾಡಿ, 'ಹಳೆಯ ದ್ವೇಷದಿಂದಲೇ ಆರೋಪಿಗಳು ಸಾಗರ್ ಮತ್ತು ಇಸಾಹಕ್ ಅವರನ್ನು ಕೊಲೆ ಮಾಡಿದ್ದಾರೆ. ಬಂಧಿತರನ್ನು ಮುತ್ತಣ್ಣ ಗೌಡ, ಸಂತೋಷ್, ಸಂಜಯ್, ಭರತ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article