ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ ಪತ್ನಿ ಕಾಂಚನ ನಿತಿನ್ ಗಡ್ಕರಿ
Wednesday, November 26, 2025
ಉಚ್ಚಿಲ: ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರ ಧರ್ಮಪತ್ನಿ ಕಾಂಚನ ನಿತಿನ್ ಗಡ್ಕರಿ ಅವರು ಬುಧವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶ್ರೀಕ್ಷೇತ್ರದ ವತಿಯಿಂದ ಅವರಿಗೆ ಸ್ಮರಣಿಕೆ ಮತ್ತು ಪ್ರಸಾದ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಸದಸ್ಯರು ಶಿವಕುಮಾರ್ ಮೆಂಡನ್, ದಿನೇಶ್ ಎರ್ಮಾಳ್, ಅರ್ಚಕರಾದ ಶ್ರೀನಿವಾಸ್ ಉಪಾಧ್ಯಾಯ, ದೇವಸ್ಥಾನದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕೆರೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಾದ ಆಶಿಕಾ, ನವೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
