ಕ್ರಿಸ್ಮಸ್‌ ಹಿನ್ನಲೆಯಲ್ಲಿ ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ

ಕ್ರಿಸ್ಮಸ್‌ ಹಿನ್ನಲೆಯಲ್ಲಿ ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ

ನವದೆಹಲಿ: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ ಭೇಟಿ ನೀಡಿ ಪ್ರಾರ್ಥನೆ ಮಾಡಿದರು.

ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಮೋದಿ ಭೇಟಿಯ ಸಂದರ್ಭದಲ್ಲಿ ದೆಹಲಿಯ ದೆಹಲಿ ಮತ್ತು ಉತ್ತರ ಭಾರತದ ಹಲವು ಕ್ರಿಶ್ಚಿಯನ್‌ ಬಾಂಧವರು ಭಾಗಿಯಾಗಿದ್ದರು.

ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮೋದಿ, ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದೆ. ಈ ಸೇವೆಯು ಪ್ರೀತಿ, ಶಾಂತಿ ಮತ್ತು ಕರುಣೆಯ ಅಕಾಲಿಕ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್‌ಮಸ್‌ನ ಚೈತನ್ಯವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಪ್ರೇರೇಪಿಸಲಿ ಎಂದು ಬರೆದುಕೊಂಡಿದ್ದಾರೆ.  

ಯೇಸುಕ್ರಿಸ್ತನ ಬೋಧನೆಗಳು ನಮ್ಮ ಸಮಾಜದಲ್ಲಿ ಸಾಮರಸ್ಯವನ್ನು ಬಲಪಡಿಸಲಿ. ಎಲ್ಲರಿಗೂ ಕ್ರಿಸ್ಮಸ್‌ ಹಬ್ಬದ ಶುಭಾಶಯಗಳು ಎಂದು ಪೋಸ್ಟ್‌ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಪ್ರಧಾನಿ ಮೋದಿ ಕ್ರಿಶ್ಚಿಯನ್ ಸಮುದಾಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ನಿಯಮಿತವಾಗಿ ಹಾಜರಾಗುತ್ತಿದ್ದಾರೆ. 2023 ರ ಈಸ್ಟರ್ ಸಮಯದಲ್ಲಿ ಮೋದಿ ದೆಹಲಿಯ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2023ರ ಕ್ರಿಸ್‌ಮಸ್‌ ವೇಳೆ ದೆಹಲಿಯ ತಮ್ಮ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಸಚಿವ ಜಾರ್ಜ್ ಕುರಿಯನ್ ಅವರ ನಿವಾಸದಲ್ಲಿ 2024 ರಲ್ಲಿ ನಡೆದ ಭೋಜನಕೂಟ ಮತ್ತು ಭಾರತದ ಕ್ಯಾಥೋಲಿಕ್ ಬಿಷಪ್‌ಗಳ ಸಮ್ಮೇಳನವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article