ಹೊಸ ವರ್ಷ ಆಚರಣೆ ಅಲ್ಲ, ಈ ಬಾರಿ ರಾಜ್ಯದಲ್ಲಿ ಡ್ರಗ್ಸ್ ಸೆಲೆಬ್ರೇಶನ್: ಆ‌ರ್.ಅಶೋಕ್ ವಾಗ್ದಾಳಿ

ಹೊಸ ವರ್ಷ ಆಚರಣೆ ಅಲ್ಲ, ಈ ಬಾರಿ ರಾಜ್ಯದಲ್ಲಿ ಡ್ರಗ್ಸ್ ಸೆಲೆಬ್ರೇಶನ್: ಆ‌ರ್.ಅಶೋಕ್ ವಾಗ್ದಾಳಿ

ಉಡುಪಿ: ಈ ಬಾರಿ ಹೊಸ ವರ್ಷ ಆಚರಣೆ ಅಲ್ಲ, ಡ್ರಗ್ಸ್ ಸೆಲೆಬ್ರೇಶನ್ ಎಂದು ವಿಪಕ್ಷ ನಾಯಕ ಆ‌ರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಕಾಪುವಿನ ಮಂಥನ್ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರುತ್ತಿದೆ.ಬೆಂಗಳೂರಿನ ಡ್ರಗ್ಸ್ ಮಾಫಿಯಾವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡುತ್ತಾರೆ.ಡ್ರಗ್ಸ್ ಮಾಫಿಯಾ ರಾಜ್ಯವನ್ನು ಸುತ್ತುವರೆದಿದೆ.ಈ ಸರ್ಕಾರ ಅದನ್ನು ತಡೆಯುವ ಕೆಲಸ ಮಾಡಿಲ್ಲ ಎಂದು ಹೇಳಿದರು.ಮಹಾರಾಷ್ಟ್ರ ಪೊಲೀಸರು ಬೆಂಗಳೂರಲ್ಲಿ ರೇಡ್ ಮಾಡುತ್ತಾರೆ. ಕೋಟ್ಯಂತರ ರೂಪಾಯಿ ಡ್ರಗ್ಸ್‌ ವಶಪಡಿಸಿಕೊಳ್ಳುತ್ತಾರೆ. ಇದು ನಮ್ಮ ಪೊಲೀಸರಿಗೆ ಯಾಕೆ ಗೊತ್ತಾಗಲ್ಲ?

ಇದಕ್ಕಿಂತ ಅವಮಾನ ಏನಿದೆ?ಈ ಸರ್ಕಾರಕ್ಕೆ ನಾಚಿಕೆ ಆಗಬೇಕು.. ನಿಮಗೆ ಮಾನ ಮರ್ಯಾದೆ ಇದೆಯಾ? ಕರ್ನಾಟಕದಲ್ಲಿ ಇಂಟಲಿಜೆನ್ಸ್ ಸತ್ತು ಹೋಗಿದೆಯಾ? ಅವರು ಕರ್ನಾಟಕ ಪೊಲೀಸರ ಸಹಾಯ ಪಡೆದು ಕಾರ್ಯಾಚರಣೆ ಮಾಡಿದ್ದು ಎನ್ನುತ್ತೀರಿ. ನಿಮಗೆ ಯಾಕೆ ಈ ಮಾಫಿಯಾ ಗೊತ್ತಾಗಿಲ್ಲ?ಗೃಹ ಸಚಿವರಿಗೆ ಕಾಮನ್ ಸೆನ್ಸ್ ಇಲ್ವಾ? ಎಂದು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article