ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ನೇಮಕ
Saturday, December 20, 2025
ಬೆಂಗಳೂರು: ದೇಶದ ಅತೀ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಇದುವರೆಗೆ ಅವರು ಅಧ್ಯಕ್ಷರಾಗಿದ್ದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇಮಕಗೊಂಡಿದ್ದಾರೆ.
ಈ ಹಿಂದೆ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಖಂಡ್ರೆ, ಸಂಘಟನೆಯ ಸೈದ್ಧಾಂತಿಕ ಚೌಕಟ್ಟಿನಲ್ಲಿ, ವಿಶೇಷವಾಗಿ ಸಮುದಾಯದ ಏಕತೆಯನ್ನು ರೂಪಿಸುವಲ್ಲಿ ಮತ್ತು ವೀರಶೈವರಿಗೆ ಪ್ರತ್ಯೇಕ ಧಾರ್ಮಿಕ ಮಾನ್ಯತೆಗಾಗಿ ದೀರ್ಘಕಾಲದ ಹೋರಾಟ ನಡೆಸಿದ ನಾಯಕರಾಗಿದ್ದಾರೆ. ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರೂ, ಶತಾಯುಷಿ ಹಿರಿಯ ನಾಯಕ, ಮಾಜಿ ಸಚಿವ ಭೀಮನ್ನ ಖಂಡ್ರೆ ಮಾಜಿ ಅಧ್ಯಕ್ಷರಾಗಿದ್ದರು. ನಿವೃತ್ತ ಡಿಜಿಪಿ ಶಂಕರ್ ಬಿದರಿ ಅವರು ರಾಜ್ಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.