ಡಿ.29-30ರಂದು ಉಡುಪಿ ಎಂಜಿಎಂ ಕಾಲೇಜಿನಲ್ಲಿ "ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ": ಡಾ. ತಲ್ಲೂರು ಶಿವರಾಮ ಶೆಟ್ಟಿ
ಉಡುಪಿ: ರಂಗಭೂಮಿ ಉಡುಪಿ ಇದರ ವತಿಯಿಂದ "ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ" ಡಿ. 29 ಮತ್ತು 30ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಡಿ.29ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಭುವನೇಂದ್ರ ಕಿದಿಯೂರು, ಹರಿಪ್ರಸಾದ್ ರೈ, ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎಂ. ವಿಶ್ವನಾಥ ಪೈ ರಂಗಶಿಕ್ಷಣ ಸಂಚಾಲಕ ವಿದ್ಯಾವಂತ ಆಚಾರ್ಯ ಆಗಮಿಸಲಿದ್ದಾರೆ ಎಂದರು.
ಪ್ರಧಾನ ಕಾರ್ಯದರ್ಶಿ ಕುತ್ಪಾಡಿ ಪ್ರದೀಪ್ ಚಂದ್ರ ಕುತ್ಪಾಡಿ ಮಾತನಾಡಿ, ಡಿ.29ರಂದು ಬೆಳಿಗ್ಗೆ 10.45ಕ್ಕೆ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಮಕ್ಕಳಿಂದ 'ಪುಷ್ಪರಾಣಿ', ಬೆಳಿಗ್ಗೆ 11.45ಕ್ಕೆ ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಮಕ್ಕಳಿಂದ 'ಕಾಡಿನ ಪಕ್ಷಿ ಪ್ಯಾಟೆಗೆ ಬಂತು', ಮಧ್ಯಾಹ್ನ 12.45ಕ್ಕೆ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲಿನ ಮಕ್ಕಳಿಂದ 'ಅಳಿಲು ಮರಿಯ ಹೊರಳು ಸೇವೆ', ಮಧ್ಯಾಹ್ನ 2.30ಕ್ಕೆ ಆದಿ ಉಡುಪಿ ಪ್ರೌಢಶಾಲೆಯ ಮಕ್ಕಳಿಂದ ಲಂಬಕರ್ಣನ ಉಷ್ಣೇಶ, ಮಧ್ಯಾಹ್ನ 3.30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲ್ ಮಕ್ಕಳಿಂದ 'ಕಾವ್ಯ ಕಥಾನಾಟಕ' ಹಾಗೂ ಸಂಜೆ 4.30ಕ್ಕೆ ಮಣಿಪಾಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಮಕ್ಕಳಿಂದ 'ಕಾಮನ್‌ಸೆನ್ಸ್ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಡಿ.30ರಂದು ಬೆಳಿಗ್ಗೆ 9.30ಕ್ಕೆ ಉಡುಪಿ ಬೈಲಕರೆ ಶ್ರೀ ಅನಂತೇಶ್ವರ ಪ್ರೌಢಶಾಲೆಯ ಮಕ್ಕಳಿಂದ 'ಒಮ್ಮೆ ಸಿಕ್ಕರೆ' ನಾಟಕ, 11 ಗಂಟೆಗೆ ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ 'ಕತ್ತಲೆ ನಗರ ತಲೆಕೆಟ್ಟ ರಾಜ ', ಮಧ್ಯಾಹ್ನ 2 ಗಂಟೆಗೆ ಕುಂಜಿಬೆಟ್ಟು ಟಿಎ ಪೈ ಆಂಗ್ಲ ಮಾಧ್ಯಮ ಶಾಲೆಯಿಂದ 'ತಾರೆ', 3 ಗಂಟೆಗೆ ಸೈಂಟ್ ಸಿಸಿಲೀಸ್ ಪ್ರೌಢಶಾಲೆ ಮಕ್ಕಳಿಂದ 'ಅಳಿಲು ರಾಮಾಯಣ' ಹಾಗೂ ಸಂಜೆ 4 ಗಂಟೆಗೆ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ 'ಎಂಡ್ ಇಲ್ಲದ ಬಂಡ್ ಅವತಾರ' ನಾಟಕಗಳು ಪ್ರದರ್ಶನಗೊಳ್ಳಲಿವೆ. ಡಿ.30ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅದಾನಿ ಗ್ರೂಪ್ ನ ಅಧ್ಯಕ್ಷ ಕಿಶೋರ್ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು ಇದ್ದರು.