ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಗುಜುರಿಗೆ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಗುಜುರಿಗೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ದೆಹಲಿಯಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ವಾಹನಗಳ ಗುಜರಿ ನೀತಿ ಇದೀಗ ಕರ್ನಾಟಕದಲ್ಲೂ ಗಂಭೀರವಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆಯಲ್ಲಿದೆ.

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ ವೆಹಿಕಲ್ ಸ್ಕ್ರ್ಯಾಪಿಂಗ್ ಫೆಸಿಲಿಟಿ (Registered Vehicle Scrapping Facility) ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರಕಾರವು ಕಳೆದ ಸೆಪ್ಡೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಇಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, 'ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ: 04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರಕಾರವು ವಾಹನ್ ಪೊರ್ಟಲಿನಲ್ಲಿ ರದ್ದುಪಡಿಸಲಾಗಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (Registered Vehicle Scrapping Facility) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ತಿಳಿಸಿದರು.

2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರೀಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರೀಯಗೊಳಿಸಲು ಬಾಕಿ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.

Ads on article

Advertise in articles 1

advertising articles 2

Advertise under the article