ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ; ಸೋಮವಾರ ದಾವಣಗೆರೆಯಲ್ಲಿ ಅಂತ್ಯಕ್ರಿಯೆ: ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ; ಸೋಮವಾರ ದಾವಣಗೆರೆಯಲ್ಲಿ ಅಂತ್ಯಕ್ರಿಯೆ: ದಾವಣಗೆರೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ದಾವಣಗೆರೆ: ರಾಜ್ಯ ರಾಜಕಾರಣದ ಹಿರಿಯ ಧುರೀಣ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದು, ಸೋಮವಾರ (ಡಿ.15) ದಾವಣಗೆರೆಯಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ನಗರ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಾವಣಗೆರೆ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುಧಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ವಿವಿ ಪರೀಕ್ಷೆಗಳು ಮುಂದೂಡಿಕೆ

ಅಲ್ಲದೇ ಸೋಮವಾರ (ಡಿ.15) ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳೂ ಸಗ ಮುಂದೂಡಿಕೆಯಾಗಿದೆ. ನಾಳಿನ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿರುವುದಾಗಿ ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸಿ.ಕೆ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದೂಡಿಕೆಯಾದ ಪರೀಕ್ಷಾ ದಿನಾಂಕವನ್ನ ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶಾಮನೂರು ಅವರು ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ. ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ

1969 ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ ಆರಂಭವಾಯಿತು. 1971 ರಲ್ಲಿ ಪುರಸಭೆ ಅಧ್ಯಕ್ಷರಾದರು. ದಶಕಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ ಇವರು, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

1994 ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2023 ರಲ್ಲಿ ನಡೆದ ಚುನಾವಣೆಯಲ್ಲಿ 57.59% ಮತಗಳೊಂದಿಗೆ ತಮ್ಮ 6ನೇ ಅವಧಿಗೆ ಆಯ್ಕೆಯಾದರು. ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್ ಅವರನ್ನು 27,888 ಮತಗಳ ಅಂತರದಿAದ ಸೋಲಿಸಿದ್ದರು. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಕೂಡ ದಾವಣಗೆರೆ ಉತ್ತರ ಕ್ಷೇತ್ರದಿಂದ ಶಾಸಕರಾಗಿ ಮತ್ತು ಸಚಿವರಾಗಿ ಆಯ್ಕೆಯಾಗಿದ್ದಾರೆ. ಸೊಸೆ ಪ್ರಭಾ ಮಲ್ಲಿಕಾರ್ಜುನ ಅವರು ಈಗ ಸಂಸದರಾಗಿದ್ದಾರೆ.

Ads on article

Advertise in articles 1

advertising articles 2

Advertise under the article