ಜ.4ರಂದು ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ: ಅಧ್ಯಕ್ಷ ನಾಗೇಶ ಬಿಲ್ಲವ

ಜ.4ರಂದು ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ: ಅಧ್ಯಕ್ಷ ನಾಗೇಶ ಬಿಲ್ಲವ

ಉಡುಪಿ: ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ. ಹಾಗೆಯೇ ಇದೇ ಸಂದರ್ಭದಲ್ಲಿ ಸಂಘದ ನೂತನ ವರ್ಷದ ಡೈರಿ ಬಿಡುಗಡೆ, ನಿವೃತ್ತ ಉಪ ವಲಯ ಅರಣ್ಯ ಅಧಿಕಾರಿಗಳಿಗೆ ಸನ್ಮಾನ, ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ತಿಳಿಸಿದರು. 

ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅದಾನಿ ಪವರ್ ಗ್ರೂಪ್ ನ ಅಧ್ಯಕ್ಷ ಕಿಶೋರ್ ಆಳ್ವ ಅವರು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ಸ್ವರ್ಣಲಕ್ಷ್ಮೀ ಕೆ. ಮೂಡುಬೆಳ್ಳೆ ಮತ್ತು ತಕ್ಷಕ್ ಪೋಳ್, ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಆಶಿಕ್ ಕೆ. ನಾಯರ್, ಬಿ.ಎಸ್ಸಿ ಪದವಿ ಪರೀಕ್ಷೆಯಲ್ಲಿ ಸಾಧನೆಗೈದ ಸ್ವಾತಿಕ್ ಕೆ. ನಾಯರ್, B.pharm ಸಾಧನೆಗೈದ ಎನ್. ನಿಶಾಂತ್ ಬಿಲ್ಲವ, ಎಂ.ಟೆಕ್ ನಲ್ಲಿ ಸಾಧನೆಗೈದ ಮೇಧಾ ಎಸ್ ಅವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ನೀಟ್ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದ ಡಾ. ಎನ್. ಸುಶಾಂತ್ ಬಿಲ್ಲವ ಅವರಿಗೆ ವಿಶೇಷ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಹಾಗೆಯೇ ಪರಿಸರ ಮತ್ತು ಇತರೆ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರವಿ, ಕೋಶಾಧಿಕಾರಿ ಗೋವಿಂದ ಎಂ. ಪಟಗಾರ್, ಜೊತೆ ಕಾರ್ಯದರ್ಶಿ ನಾಗರಾಜ್, ಸಂಘಟನಾ ಕಾರ್ಯದರ್ಶಿ ಜಿ. ಕೃಷ್ಣಪ್ಪ ಇದ್ದರು.

Ads on article

Advertise in articles 1

advertising articles 2

Advertise under the article