ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಹೊಡೆದು ಕೊಂದ ಪತಿ; ಮಗು ಕೂಡಾ ಉಸಿರುಗಟ್ಟಿ ಸಾವು

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಹೊಡೆದು ಕೊಂದ ಪತಿ; ಮಗು ಕೂಡಾ ಉಸಿರುಗಟ್ಟಿ ಸಾವು

ಭೋಪಾಲ್: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಮಾಡಿ ಕೊಂದು ಹಾಕಿದ್ದು, ಈ ವೇಳೆ ಉಸಿರುಗಟ್ಟಿ 6 ತಿಂಗಳ ಮಗು ಕೂಡ ಧಾರುಣ ಸಾವನ್ನಪ್ಪಿರುವ ಘಟನೆ ಮಧ್ಯ ಪ್ರದೇಶದಲ್ಲಿ ವರದಿಯಾಗಿದೆ.

ಮಧ್ಯಪ್ರದೇಶದ ಖಾರ್ಗೋನೆಯ ಬೇಡ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಕೊಲೆ ಪ್ರಕರಣ ನಡೆದಿದ್ದು, ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿದ್ದಾಳೆ.

ಬಳಿಕ ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಕೂಡ ಉಸಿರುಗಟ್ಟಿ ಮೃತಪಟ್ಟಿದೆ ಎಂದು ಹೇಳಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಮನೆಯಲ್ಲಿ ಪತ್ತೆಯಾಗಿತ್ತು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.

ಮಹಿಳೆಯ ಪತಿ ಸುನಿಲ್ ಶವಗಳ ಬಳಿ ಕುಳಿತಿರುವುದು ಕಂಡುಬಂದಿದ್ದು, ಅನುಮಾನದ ಮೇಲೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಚಂಪಾಬಾಯಿಯ ದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ.

ವಿಚಾರಣೆಯ ಸಮಯದಲ್ಲಿ, ಸುನಿಲ್ ತನ್ನ ಹೆಂಡತಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಪತ್ನಿ ಶೀಲದ ಮೇಲೆ ಪತಿ ಸುನಿಲ್ ಗೆ ಶಂಕೆ ಇತ್ತು. ಆಕೆ ಪರಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿದ್ದ. ಇದೇ ವಿಚಾರವಾಗಿ ಪದೇ ಪದೇ ಜಗಳ ಮಾಡುತ್ತಿದ್ದ. ಬುಧವಾರ ರಾತ್ರಿ ಜಗಳ ತಾರಕಕ್ಕೇರಿದ್ದು, ಪತ್ನಿ ಮೇಲೆ ತೀವ್ರ ಹಲ್ಲೆ ಮಾಡಿ ಕೊಂದು ಹಾಕಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

ಬುಧವಾರ ರಾತ್ರಿ ದಂಪತಿ ನಡುವೆ ಜಗಳವಾಗಿತ್ತು. ಈ ಜಗಳದಲ್ಲಿ, ಚಂಪಾಬಾಯಿ ತಮ್ಮ ಮಗುವಿಗೆ ಹಾಲುಣಿಸುತ್ತಿದ್ದಾಗ ಸುನಿಲ್ ಆಕೆಯ ಮೇಲೆ ಹಲ್ಲೆ ನಡೆಸಿ, ಬಾಗಿಲಿಗೆ ತಳ್ಳಿ, ಕೈ, ಕಾಲಿನ ಮೇಲೆ ಕೋಲಿನಿಂದ ಹೊಡೆದಿದ್ದಾನೆ. ಆಕೆ ಮೂರ್ಛೆ ಹೋಗಿದ್ದಾಳೆಂದು ನಂಬಿ ಆರೋಪಿ ನಿದ್ರೆಗೆ ಜಾರಿದ್ದ. ಅವರ ಇಬ್ಬರು ಮಕ್ಕಳು ಈ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತೆಯೇ ಮಗು ಕೂಡ ಅಲ್ಲಿಯೇ ಇತ್ತು. ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಎರಡೂ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article