ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳನ್ನು 23 ವರ್ಷದ ಯಶಸ್ವಿನಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನಿಸಲಾಗಿದೆ ಎನ್ನಲಾಗಿದೆ.

ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಕಳೆದ ಬುಧವಾರ ಕಾಲೇಜಿಗೆ ಹೋಗಿರಲಿಲ್ಲ. ಮರುದಿನ ಕಾಲೇಜಿಗೆ ಹೋದ ವಿದ್ಯಾರ್ಥಿನಿಗೆ ಪ್ರಾಧ್ಯಾಪಕ, ಕಣ್ಣಿಗೆ ಯಾವ ಡ್ರಾಪ್ಸ್ ಹಾಕಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿದೆ? ಎಂದೆಲ್ಲಾ ಪ್ರಶ್ನಿಸಿ ಅವಮಾನಿಸಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ನೊಂದು ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಸಾವಿಗೆ ಶರಣಾಗಿದ್ದಾಳೆ. ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ತನ್ನ ಮಗಳನ್ನು ಅವಮಾನಿಸಿದ ಕಾಲೇಜಿನ ಪ್ರಾಂಶುಪಾಲ ಹಾಗೂ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Ads on article

Advertise in articles 1

advertising articles 2

Advertise under the article