ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್; ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ: ಡಿಕೆ ಶಿವಕುಮಾರ್ ಪ್ರಶ್ನೆ

ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್; ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ: ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ, ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. 

“ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ" ಎಂದು ಡಿಕೆ ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ.

ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೇ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜತೆಗೂ ಮಾತನಾಡಿದ್ದೇನೆ ಎಂದು ಡಿಸಿಎಂ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಅವರು ದೊಡ್ಡ ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ, ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಜನಾರ್ದನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಅವರ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ ಎಂದು ಡಿಸಿಎಂ ಪ್ರಶ್ನಿಸಿದ್ದಾರೆ.

ಬಳ್ಳಾರಿಯಲ್ಲಿ ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article