ದೆಹಲಿ; ಮಸೀದಿ ಬಳಿ ತೆರವು ಕಾರ್ಯಾಚರಣೆ ವೇಳೆ ಭುಗಿಲೆದ್ದ ಹಿಂಸಾಚಾರ; FIR ದಾಖಲು, ಐವರು ಆರೋಪಿಗಳ ಬಂಧನ

ದೆಹಲಿ; ಮಸೀದಿ ಬಳಿ ತೆರವು ಕಾರ್ಯಾಚರಣೆ ವೇಳೆ ಭುಗಿಲೆದ್ದ ಹಿಂಸಾಚಾರ; FIR ದಾಖಲು, ಐವರು ಆರೋಪಿಗಳ ಬಂಧನ

ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದ ಸೈಯದ್ ಫೈಜ್ ಇಲಾಹಿ ಮಸೀದಿ ಬಳಿ ನಡೆದ ತೆರವು ಕಾರ್ಯಾಚರಣೆಯ ವೇಳೆ ಭುಗಿಲೆದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮಸೀದಿಗೆ ಹೊಂದಿಕೊಂಡಿರುವ ಭೂಮಿ ಮತ್ತು ಹತ್ತಿರದ ಸ್ಮಶಾನ ಪ್ರದೇಶದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಕೆಲವರು ಪೊಲೀಸರ ಮೇಲೆ ಕಲ್ಲು ಮತ್ತು ಗಾಜಿನ ಬಾಟಲಿಗಳನ್ನು ಎಸೆದಿದ್ದರು. ಘಟನೆಯಲ್ಲಿ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ದೆಹಲಿ ಹೈಕೋರ್ಟ್‌ನ ನಿರ್ದೇಶನದಂತೆ ಎಂಸಿಡಿ ಅಧಿಕಾರಿಗಳು ಮಸೀದಿಗೆ ಹೊಂದಿಕೊಂಡಿರುವ ಭೂಮಿ ಮತ್ತು ತುರ್ಕಮನ್ ಗೇಟ್‌ನಲ್ಲಿರುವ ಹತ್ತಿರದ ಸ್ಮಶಾನದಲ್ಲಿ ಅತಿಕ್ರಮಣ ಪ್ರದೇಶದಲ್ಲಿ ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಮಸೀದಿಗೆ ಯಾವುದೇ ಹಾನಿಯಾಗಿಲ್ಲ ಎಂದು ಎಂಸಿಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಮಾರು 20 ರಿಂದ 25 ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಐದು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂಸಾಚಾರವು ತೆರವು ಕಾರ್ಯಾಚರಣೆಯನ್ನು ಅಡ್ಡಿಪಡಿಸಲು ಪೂರ್ವ ಯೋಜಿತ ಪ್ರಯತ್ನವಾಗಿದೆಯೇ ಎಂಬದರ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕಲ್ಲು ತೂರಾಟದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪ್ರಯತ್ನಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣ, ಸಿಸಿಟಿವಿ ದೃಶ್ಯ ಹಾಗೂ ಬಾಡಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ವಿಡಿಯೋಗಳನ್ನು ವಿಶ್ಲೇಷಿಸಲಾಗುತ್ತಿದೆ. ತನಿಖೆಯ ಭಾಗವಾಗಿ ಸಾಕ್ಷಿಗಳು ಮತ್ತು ಬಂಧಿತ ವ್ಯಕ್ತಿಗಳ ಹೇಳಿಕೆಗಳನ್ನು ಸಹ ದಾಖಲಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article