ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಹತ್ಯೆ ಮಾಡಿದ ಪತಿ!

ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಹತ್ಯೆ ಮಾಡಿದ ಪತಿ!

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.

ಹತ್ಯೆಯಾದವಳನ್ನು ರಾಧಾ (40) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಕುಮಾರ ಕೊಲೆಗೈದ ಆರೋಪಿಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ರಾಧಾ ಪತಿಯಿಂದ ಬೇರೆ ವಾಸವಾಗಿದ್ದಳು. ಜನವರಿ ಮೊದಲ ವಾರ ಕುಮಾರ ಶಬರಿಮಲೆಗೆ ತೆರಳಲು ಇರುಮುಡಿ ಕಟ್ಟುವ ವೇಳೆ ಪತ್ನಿ ಸ್ಥಾನದಲ್ಲಿ ಬೇರೊಬ್ಬ ಮಹಿಳೆ ಪೂಜೆ ಮಾಡಿದ ಬಗ್ಗೆ ರಾಧಾಗೆ ಮಾಹಿತಿ ತಿಳಿದಿತ್ತು. ಕುಮಾರ ಶಬರಿಮಲೆಗೆ ಹೋಗಿ ಬಂದ ದಿನವೇ ಇದೇ ವಿಚಾರವನ್ನು ಪ್ರಶ್ನೆ ಮಾಡಲು ಜ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು.

ಅದೇ ದಿನ ರಾಧಾಳನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಹಾಸನ ತಾಲೂಕಿನ ಕಂದಲಿ ಬಳಿಯ ಯಗಚಿ ನದಿಗೆ ಶವ ಬಿಸಾಡಿದ್ದ. ಸೋಮವಾರ (ಜ.12) ತಾನೇ ಪೊಲೀಸರಿಗೆ ಮಾಹಿತಿ ನೀಡಿದ್ದ. ಇಂದು (ಜ.13) ಯಗಚಿ ನದಿಯಿಂದ ಪೊಲೀಸರು ಮೃತದೇಹ ಹೊರ ತೆಗೆದಿದ್ದಾರೆ. ಪತಿ ಕುಮಾರ ಹಾಗೂ ಆತನ ಮನೆಯವರು ಸೇರಿ ಹತ್ಯೆ ಮಾಡಿದ್ದಾರೆ ಎಂದು ರಾಧಾ ಕುಟುಂಬಸ್ಥರು ಆರೋಪಿಸಿದ್ದಾರೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article