ಉಡುಪಿ: ಕೋಡಿಬೆಂಗ್ರೆ ಸಮುದ್ರದ ಮಧ್ಯೆ ಪ್ರವಾಸಿ ದೋಣಿ ಮುಳುಗಡೆ: ಇಬ್ಬರು ಮೃತ್ಯು, ಓರ್ವಳ ಸ್ಥಿತಿ ಗಂಭೀರ

ಉಡುಪಿ: ಕೋಡಿಬೆಂಗ್ರೆ ಸಮುದ್ರದ ಮಧ್ಯೆ ಪ್ರವಾಸಿ ದೋಣಿ ಮುಳುಗಡೆ: ಇಬ್ಬರು ಮೃತ್ಯು, ಓರ್ವಳ ಸ್ಥಿತಿ ಗಂಭೀರ

ಮಲ್ಪೆ: ಕೋಡಿಬೆಂಗ್ರೆ ಬೀಚ್ ಸಮೀಪ ಮಧ್ಯಾಹ್ನ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಶಂಕರಪ್ಪ(22) ಹಾಗೂ ಸಿಂಧು(23) ಎಂದು ಗುರುತಿಸಲಾಗಿದೆ. ದೀಶಾ(26) ಎಂಬವರು ಸ್ಥಿತಿ ಗಂಭೀರವಾಗಿದ್ದು, ಧರ್ಮರಾಜ(26) ಎಂಬವರ ಸ್ಥಿತಿ ಸ್ಥಿರವಾಗಿದೆ. ಇವರು ಮೈಸೂರು ಜಿಲ್ಲೆಯ ಸರಸ್ವತೀಪುರಂ ಮೂಲದವರಾಗಿದ್ದು, ಅಲ್ಲಿನ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಾರು ಎನ್ನಲಾಗಿದೆ.

ಒಟ್ಟು 14 ಮಂದಿಯ ತಂಡ ಉಡುಪಿಗೆ ಪ್ರವಾಸಕ್ಕೆ ಬಂದಿದ್ದು, ಇವರು ಕೋಡಿಬೆಂಗ್ರೆ ಡೆಲ್ಟಾ ಬೀಚ್‌ನಿಂದ ಪ್ರವಾಸಿ ದೋಣಿ ಸಮುದ್ರದಲ್ಲಿ ವಿಹಾರಕ್ಕೆ ಹೊರಟಿದ್ದರು. ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಹಂಗಾರಕಟ್ಟೆ ಶಿಪ್ ಬಿಲ್ಡಿಂಗ್ ಪ್ರದೇಶದ ಸಮೀಪ ನದಿ-ಸಮುದ್ರ ಸೇರುವ ಸ್ಥಳದಲ್ಲಿ ದೋಣಿ ಅಕಸ್ಮಿಕವಾಗಿ ಪಲ್ಟಿಯಾಯಿತು.

ಇದರಿಂದ ದೋಣಿಯಲ್ಲಿದ್ದ 14 ಮಂದಿ ಸಮುದ್ರದ ನೀರಿಗೆ ಬಿದ್ದರು. ಇವರಲ್ಲಿ ಕೆಲವರು ಮಾತ್ರ ಲೈಫ್‌ಜಾಕೆಟ್ ಧರಿಸಿದ್ದರೆನ್ನಲಾಗಿದೆ. ಕೂಡಲೇ ಇತರ ದೋಣಿಯವರು ನೀರಿಗೆ ಬಿದ್ದವರನ್ನು ರಕ್ಷಿಸಿ ತೀರಕ್ಕೆ ಕರೆದುಕೊಂಡು ಬಂದಿದ್ದು, ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಇವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ಇಬ್ಬರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article