ಪಾಂಗಾಳ; ಬಸ್ ಡಿಕ್ಕಿ: ಸ್ಕೂಟಿ ಸವಾರ ಮೃತ್ಯು
Monday, January 5, 2026
ಕಾಪು: ಪಾಂಗಾಳ ಬಳಿ ಖಾಸಗಿ ಬಸ್ಸೊಂದು ಸ್ಕೂಟಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತ ಸ್ಕೂಟಿ ಸವಾರನನ್ನು ಮೂಳೂರು ನಿವಾಸಿ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಪಾಂಗಾಳದ ಕ್ರಾಸ್ ಬಳಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ವೇಳೆ ಸ್ಕೂಟಿ ಸವಾರ ಕೃಷ್ಣರಾಜ್ ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್ ಜಲ್ಲು ಉಚ್ಚಿಲ ಅವರು ಮೂಳೂರು SDPI ಅಂಬ್ಯುಲೆನ್ಸ್ ಚಾಲಕ ಹಮೀದ್ ಅವರ ಸಹಾಯದಿಂದ ಗಂಭೀರ ಗಾಯಗೊಂಡಿದ್ದ ಕೃಷ್ಣರಾಜ್ ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.


