ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿಯಿಂದ ಬೇಸತ್ತು ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿಯಿಂದ ಬೇಸತ್ತು ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ.ಸಿ.ಜೆ.ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳ ಮೂಲದ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.

ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ತಮ್ಮ ಕುಟುಂಬದ ಮೇಲೆ ಪದೇ ಪದೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿದ್ದ ದಾಳಿಗೆ ಹೆದರಿ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.

ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್‌ನ SBS ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದಾರೆ.

Ads on article

Advertise in articles 1

advertising articles 2

Advertise under the article