ಕಾಪು; 65 ಲಕ್ಷ ರೂಪಾಯಿ ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಬುಧವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷರಾದ ಉಷಾ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶಾಂತಿ ಆಚಾರ್ಯ, ಸಂತೋಷ್ ಶೆಟ್ಟಿ, ವಸಂತಿ ಬಂಡಸಾಲೆ, ವಸಂತಿ ಮಧ್ವರಾಜ್, ದಯಾನಂದ್ ಶೆಟ್ಟಿಗಾರ್, ಹರೀಶ್ ಬೆಳ್ಳಿಬೆಟ್ಟು, ಶೋಭಾ ಶೆಟ್ಟಿ, ಎಲ್ಲೂರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್, ಗ್ರಾಮ ಆಡಳಿತಾಧಿಕಾರಿ ವೆಂಕಟೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ, ಮುದರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾದಿಕಾರಿ ಡಾ.ಸುಬ್ರಹ್ಮಣ್ಯ ಪ್ರಭು, ಗುತ್ತಿಗೆದಾರ ಜಯಸೂರ್ಯ ಶೆಟ್ಟಿ, ಅರ್ಚಕ ಸತ್ಯನಾರಾಯಣ ಭಟ್ ಪ್ರಮುಖರಾದ ಸದಾಶಿವ ಶೆಟ್ಟಿ ಎಲ್ಲೂರು, ಗಣೇಶ್ ಮೂಲ್ಯ, ವೆಂಕಟು ದೇವಾಡಿಗ, ಕಿರಣ್ ಭಟ್, ಸದಾನಂದ ಪೂಜಾರಿ, ಸಂದೇಶ್, ಗುರು ಭಟ್ ,ಶಿವರಾಂ, ಬಾಲಕೃಷ್ಣ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.