ಉಡುಪಿಯಲ್ಲಿ ಆರೋಗ್ಯ ಹಕ್ಕಿನ‌ ಜಾಥಾ- ಮಣಿಪಾಲದ ಟೈಗರ್ ಸರ್ಕಲ್‌ನಿಂದ DC ಕಚೇರಿಯವರೆಗೆ ಪಾದಯಾತ್ರೆ; ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆ ಜಾರಿಗೆ ಆಗ್ರಹ

ಉಡುಪಿಯಲ್ಲಿ ಆರೋಗ್ಯ ಹಕ್ಕಿನ‌ ಜಾಥಾ- ಮಣಿಪಾಲದ ಟೈಗರ್ ಸರ್ಕಲ್‌ನಿಂದ DC ಕಚೇರಿಯವರೆಗೆ ಪಾದಯಾತ್ರೆ; ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆ ಜಾರಿಗೆ ಆಗ್ರಹ

ಉಡುಪಿ: ಉಡುಪಿಯ ಹಲವಾರು ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಆರೋಗ್ಯ ಹಕ್ಕಿನ‌ಜಾಥಾ ನಡೆಯಿತು. ಫೆಬ್ರವರಿ 2 ರಿಂದ 17 ರವರೆಗೆ ಕರ್ನಾಟಕದಾದ್ಯಂತ ಎಲ್ಲಾ 31 ಜಿಲ್ಲೆಗಳಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ.

ಮಣಿಪಾಲದ ಟೈಗರ್ ಸರ್ಕಲ್‌ನಿಂದ ಡಿ.ಸಿ. ಕಚೇರಿಯವರೆಗೆ ಪಾದಯಾತ್ರೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ನೀಡಲಾಯಿತು. ಎಡಿಸಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಔಷಧಿಗಳು ಲಭ್ಯವಿರಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿತ್ತು. ಉಳಿದಂತೆ ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯಿದೆಯನ್ನು ಜಾರಿಗೆ ತರಬೇಕು.ಕರ್ನಾಟಕದ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಒತ್ತಾಯಿಸಲಾಯಿತು. ಖಾಸಗಿ ಆಸ್ಪತ್ರೆಗಳ ಶುಲ್ಕವನ್ನು ಸರ್ಕಾರ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಯಿತು.

Ads on article

Advertise in articles 1

advertising articles 2

Advertise under the article