ಉಡುಪಿ: ಕೇಂದ್ರದ ನಾಲ್ಕು ಲೇಬರ್ ಕೋಡ್ ಹಿಂಪಡೆಯುವಂತೆ ಒತ್ತಾಯಿಸಿ ರಸ್ತೆ ತಡೆ- ಪ್ರತಿಭಟನೆ; ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ನಡೆದ ಬ್ರಹತ್ ಪ್ರತಿಭಟನೆ

ಉಡುಪಿ: ಕೇಂದ್ರದ ನಾಲ್ಕು ಲೇಬರ್ ಕೋಡ್ ಹಿಂಪಡೆಯುವಂತೆ ಒತ್ತಾಯಿಸಿ ರಸ್ತೆ ತಡೆ- ಪ್ರತಿಭಟನೆ; ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ನಡೆದ ಬ್ರಹತ್ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಹಿಂಪಡೆಯಲು ಹಾಗೂ ಕೇಂದ್ರ ಸರ್ಕಾರದ ಕಾಯ್ದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡದಂತೆ ಆಗ್ರಹಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು. 

ಉಡುಪಿ ಸರ್ವಿಸ್ ನಿಲ್ದಾಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಕೆಎಂ ಮಾರ್ಗ, ಕೋರ್ಟ್ ರೋಡ್ ಮೂಲಕ ಸಾಗಿ ಜೋಡುಕಟ್ಟೆ ಬಳಿ ರಸ್ತೆ ತಡೆ ನಡೆಸುವ ಮೂಲಕ ಮುಕ್ತಾಯಗೊಂಡಿತು.

ಜೋಡುಕಟ್ಟೆಯಲ್ಲಿ ರಸ್ತೆತಡೆ ನಡೆಸಿ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ 44 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿರುವುದು ಬಂಡವಾಳಗಾರರಿಗೆ ಬ್ರಹತ್ ಲಾಭ ಮಾಡಿ ದುಡಿಯುವ ವರ್ಗದ ಜನರಿಗೆ ಮಾಡಿದ ಮಹಾಮೋಸ ಮಾಡುವಂತದ್ದಾಗಿದೆ ಅಲ್ಲದೇ ಕಾರ್ಪೋರೇಟ್ ಕಂಪೆನಿಗಳಲ್ಲಿ ಇತ್ತೀಚೆಗೆ ದುಡಿಯುತ್ತಿರುವ ಯುವಜನರಿಗೂ ಭವಿಷ್ಯದಲ್ಲಿ ಅಭದ್ರತೆ ಕಾಡಲಿದೆ ಎಂದು ಪ್ರತಿಭಟನಾಕಾರರು ದೂರಿದರು. 

ಕೇಂದ್ರ ಸರ್ಕಾರ ಖಾಸಗೀಕರಣ ಭಾಗವಾಗಿ ತಂದಿರುವ ವಿದ್ಯುತ್ ಕಾಯ್ದೆ -2025 ಅನುದಾನ ಕಡಿತ ಮಾಡಿ ಉದ್ಯೋಗ ಖಾತ್ರಿ ಯೋಜನೆಯನ್ನು ಹಳ್ಳ ಹಿಡಿಸುವ ಯೋಜನೆ ವಿರುದ್ಧ ಕಾರ್ಖಾನೆ ಕಾಯ್ದೆ ತಿದ್ದುಪಡಿ ವಿರುದ್ಧ,ಕಟ್ಟಡ ಕಾರ್ಮಿಕರ ಕಲ್ಯಾಣ ಕಾಯ್ದೆ ರದ್ದತಿ ವಿರುದ್ಧ, ಆಟೋರಿಕ್ಷಾ ಮತ್ತು ವಾಹನ ಚಾಲಕರ ಬೇಡಿಕೆಗಳಿಗಾಗಿ ಬೀಜ ಮಸೂದೆ ಕಾಯ್ದೆ ವಿರುದ್ಧ, ಸಾರ್ವಜನಿಕ ಆಸ್ತಿಗಳನ್ನು ಖಾಸಗೀಕರಣದ ವಿರುದ್ಧ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.

Ads on article

Advertise in articles 1

advertising articles 2

Advertise under the article